ಕೃತಕ ಬುದ್ಧಿಮತ್ತೆ ಆವಿಷ್ಕಾರ ಸದ್ಬಳಕೆ ಮುಖ್ಯ: ಸಿ.ವಿ.ಗೌಡರ್
Jun 22 2024, 12:48 AM ISTಕೃತಕ ಬುದ್ಧಿಮತ್ತೆ ಆವಿಷ್ಕಾರ ಈಗಿನ್ನೂ ಆರಂಭಿಕ ಹಂತದಲ್ಲಿದ್ದು, ಮುಂದೆ ವ್ಯಾಪಕವಾದಲ್ಲಿ ತಂತ್ರಾಂಶ ಅಭಿವೃದ್ಧಿ ಅಂದರೆ ಸಾಫ್ಟ್ ವೇರ್ ಡೆವಲೆಪ್ಮೆಂಟ್ ಸಹಾ ಒಂದು ಕೌಶಲ್ಯವಾಗಿರದೇ ಸಾಮಾನ್ಯ ಎನ್ನಿಸಬಹುದು. ಆದ್ದರಿಂದ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಇರುವವರು ಕೃತಕ ಬುದ್ಧಿಮತ್ತೆಯ ಚಿಕ್ಕಚಿಕ್ಕ ಕೋರ್ಸ್‌ಗಳನ್ನು ಈಗಿನಿಂದಲೇ ಪಡೆಯುವುದು ಕ್ಷೇಮಕರ ಎಂದು ಬೆಂಗಳೂರಿನ ಎಂಪ್ಲೇ ಇನ್ಕಾರ್ಪೊರೇಷನ್ ಮುಖ್ಯ ವಿಶ್ಲೇಷಣಾಧಿಕಾರಿ ಸಿ.ವಿ.ಗೌಡರ್ ದಾವಣಗೆರೆಯಲ್ಲಿ ಹೇಳಿದ್ದಾರೆ.