ಕೃಷಿ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಅವಶ್ಯ
Feb 10 2025, 01:47 AM ISTಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಕೃಷಿ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಸೂಕ್ತವಾಗಿ ಹಾಗೂ ಸ್ಥಳೀಯವಾಗಿ ನಿರ್ಧರಿಸಲು, ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ಸೂಕ್ತವಾಗಿ ನಿರ್ಣಯ ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ತಿಳಿಸಿದರು.