18ರಿಂದ ಕೃಷಿ, ತೋಟಗಾರಿಕೆ ಮೇಳ: ಡಾ. ಜಗದೀಶ್
Oct 17 2024, 01:38 AM ISTಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಅ.18 ರಿಂದ 21 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮತ್ತು ತೋಟಗಾರಿಕಾ ಮೇಳ-2024 ಅನ್ನು ‘ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.