ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಸಂಚು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲೇ ಗೊತ್ತಿತ್ತು’ ಎಂಬ ಕೆನಡಾದ ‘ಗ್ಲೋಬ್ ಆ್ಯಂಡ್ ಮೇಲ್’ ಎಂಬ ಪತ್ರಿಕೆಯ ವರದಿಯನ್ನು ಕೆನಡಾ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದೆ.
ಮುಂಬರುವ ಕೆನಡಾ ಸಂಸತ್ ಚುನಾವಣೆಯಲ್ಲಿ, ಹಾಲಿ ಪ್ರಧಾನಿ ಜಸ್ಟಿನ್ ಟ್ರುಡೋ ಸೋಲು ಖಚಿತ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನ ಮುಖ್ಯಸ್ಥ, ಉದ್ಯಮಿ ಎಲಾನ್ ಮಸ್ಕ್ ಭವಿಷ್ಯ ನುಡಿದಿದ್ದಾರೆ.
ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರ ಪತ್ರಿಕಾಗೋಷ್ಠಿ ಮತ್ತು ಭಾರತೀಯ ಸಚಿವರ ಸಂದರ್ಶನ ಇದ್ದ ಆಸ್ಟ್ರೇಲಿಯಾ ಟೀವಿ ಚಾನೆಲ್ ಒಂದರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಮತ್ತು ಪುಟಗಳಿಗೆ ಕೆನಡಾ ನಿರ್ಬಂಧ ಹೇರಿದೆ.
‘ಕೆನಡಾದಲ್ಲಿನ ಸಿಖ್ಖರನ್ನು ಟಾರ್ಗೆಟ್ ಮಾಡುವಂತೆ ಸೂಚಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ’ ಎಂಬ ಕೆನಡಾ ಸಚಿವ ಡೇವಿಡ್ ಮಾರಿಸನ್ ಹೇಳಿಕೆಗೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.