ಕರ್ನಾಟಕ ಪ್ರಗತಿಯು ದೇಶದ ಪ್ರಗತಿಯಾಗಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ ನಿಲ್ಲಲಿದೆ. ಕರ್ನಾಟಕವನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಕೇಂದ್ರವನ್ನಾಗಿಸಲು ಎಲ್ಲ ನೆರವು ನೀಡಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ತಿಳಿಸಿದರು.
ಕಳೆದ ವರ್ಷ ನಡೆದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಾರಥ್ಯದಲ್ಲೇ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಸನ್ನದ್ಧವಾಗುತ್ತಿದೆ.
ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂಬ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಬೇಡಿಕೆ ಸರಿಯಲ್ಲ. ತೆರಿಗೆಯಲ್ಲಿ ಪಾಲಿಗೆ ಅನುಗುಣವಾಗಿ ತಮಗೆ ಪಾಲು ಸಿಗಬೇಕು ಎನ್ನುವ ಚಿಂತನೆಯೇ ಸಂಕುಚಿನ ಮನೋಭಾವದ್ದು ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸಚಿವ ಸಚಿವರು, ಕೇಂದ್ರ ಸಚಿವಾಲಯದ ಬಹುತೇಕ ಅಧಿಕಾರಿಗಳೂ ಹಿಂದಿಯಲ್ಲೇ ಸಂವಹನ ನಡೆಸುತ್ತಾರೆ. ಇದರ ಬಿಸಿ ಇದೀಗ ಕೇಂದ್ರದಲ್ಲಿ ಸಚಿವರಾಗಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೂ ತಟ್ಟಿದೆ. ಹೀಗಾಗಿ ಅವರೀಗ ಅನಿವಾರ್ಯವಾಗಿ ಹಿಂದಿ ಭಾಷೆ ಕಲಿಯಲು ಮುಂದಾಗಿದ್ದಾರೆ.
ವಿಪಕ್ಷಗಳು ಪ್ರಗತಿಪರ ಶೈಕ್ಷಣಿಕ ಸುಧಾರಣೆಗಳನ್ನು ತಮ್ಮ ಹಳೆಯ ರಾಜಕೀಯ ಅಜೆಂಡಾಗಳಿಗಾಗಿ ತಿರುಚುತ್ತಿರುವುದು ದುರಾದೃಷ್ಟಕರ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಿಡಿಕಾರಿದ್ದಾರೆ.