ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ಕ್ಯಾನ್ಸರ್ಕಾರಕ ಎಂದು ಹೇಳಿಲ್ಲ. ಬದಲಿಗೆ ಅಡಿಕೆಯನ್ನು ಗುಟ್ಕಾಗಾಗಿ ಬಳಕೆ ಮಾಡಿದಾಗ ಮಾತ್ರ ಕ್ಯಾನ್ಸರ್ಗೆ ಕಾರಣವಾಗುತ್ತಿದೆ ಎಂದು ಹೇಳಿದೆ.
ಕೇಂದ್ರ ಸರ್ಕಾರದ ಉದ್ದೇಶಿತ ‘ಒಂದು ದೇಶ, ಒಂದು ಚುನಾವಣೆ’ ಜನರ ಗಮನ ಬೇರೆಡೆ ಸೆಳೆಯುವ ತಂತ್ರ. ಯಾವುದೇ ಚರ್ಚೆ ಇಲ್ಲದೆ ಏಕಾಏಕಿ ಈ ವ್ಯವಸ್ಥೆ ಜಾರಿ ಸರಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಟಿಎಂಸಿ ಸಂಸದ ಕಲ್ಯಾನ್ ಬ್ಯಾನರ್ಜಿ ‘ಲೇಡಿ ಕಿಲ್ಲರ್’ ಎಂದು ಕರೆದಿದ್ದು ಲೋಕಸಭೆಯಲ್ಲಿ ಕೋಲಾಹಲಕ್ಕೆ ನಾಂದಿ ಹಾಡಿತು ಹಾಗೂ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.