ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೀವು ತಪ್ಪಿತಸ್ಥರು ಎಂದು ಹೈಕೋರ್ಟ್ ಹೇಳಿದೆ. ಯಡಿಯೂರಪ್ಪ ಅವರಿಗೆ ಯಾವುದೇ ಕೋರ್ಟ್ ರಾಜಿನಾಮೆ ಕೊಡುವಂತೆ ಹೇಳಿರಲಿಲ್ಲ. ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ತಾಲೂಕಿನ ಅಭಿವೃದ್ಧಿ, ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ನಾನು ಹೋರಾಟ ಮಾಡುತ್ತಿದ್ದರೆ, ಜೆಡಿಎಸ್ ಕುಟುಂಬದ ಕುಡಿಯ ಪಟ್ಟಾಭಿಷೇಕ್ಕಕ್ಕಾಗಿ ಹೋರಾಟ ಮಾಡುತ್ತಿದೆ. ಇದರಲ್ಲಿ ಯಾರು ಹಿತವರು ಎಂದು ಯೋಚಿಸಿ ಮತ ಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.
ವಕ್ಫ್ ಆಸ್ತಿ ವಿವಾದದ ಕುರಿತು ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್ ಶಾ ಪ್ರಸ್ತಾಪ ಮಾಡಿದ್ದಾರೆ. ಜೊತೆಗೆ ಕರ್ನಾಟಕದ ಬೆಳವಣಿಗೆ ಮುಂದಿಟ್ಟುಕೊಂಡು, ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಜನರ ಆಶೀರ್ವಾದದಿಂದ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆ ಆಗುವುದು ಖಚಿತ. ಅವರು ವಿಧಾನಸೌಧಕ್ಕೆ ಹೋಗಿಯೇ ಹೋಗ್ತಾರೆ. ವಿಧಾನಸಭೆಯಲ್ಲಿ ಅಭಿವೃದ್ಧಿ ಎಂದರೇನು ಎಂದು ನಿಖಿಲ್ ಅವರೇ ವಿಧಾನ ಕಲಾಪದಲ್ಲಿ ರೂಲ್ 69 ಅಡಿಯಲ್ಲಿ ಚರ್ಚೆ ಮಾಡುತ್ತಾರೆ.