ಯುವತಿ ಚಿಕಿತ್ಸೆಗೆ ಕೇಂದ್ರ ಸಚಿವ ಎಚ್‌ಡಿಕೆಯಿಂದ 50 ಸಾವಿರ ರು. ನೆರವು
Jul 20 2024, 12:46 AM ISTಎಚ್.ಡಿ.ಕುಮಾರಸ್ವಾಮಿ ಅವರು ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಮೂಲಕ ಧನ ಸಹಾಯ ಕೋರಿ ಮನವಿ ಸಲ್ಲಿಸಿದ್ದರು. ಕುಮಾರಸ್ವಾಮಿ ಅವರ ಸೂಚನೆಯಂತೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ಅವರು ನಿಶ್ಚಿತಾ ಮನೆಗೆ ತೆರಳಿ 50 ಸಾವಿರ ರು. ನೀಡಿ ಆರೋಗ್ಯ ವಿಚಾರಿಸಿದರು.