ಕೇಂದ್ರ ಸರ್ಕಾರದ ಯೋಜನೆಗಳು ಮಹಿಳೆಯರ ಪರವಾಗಿವೆ: ಹೇಮಾಮಾಲಿನಿ
Feb 14 2024, 02:19 AM ISTಭಾರತವನ್ನು ಜಗತ್ತಿನ ಮುಂಚೂಣಿ ರಾಷ್ಟ್ರವನ್ನಾಗಿಸಲು, ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ, ಯುವಜನರ ಏಳಿಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಂಕಣಬದ್ಧರಾಗಿ ಶ್ರಮಿಸುತ್ತಿದೆ. ಸಮಾಜದಲ್ಲಿ ಪುರುಷರಿಗಿಂತಲೂ ಮಹಿಳೆಯರ ಮಾತು ಹೆಚ್ಚು ಆಪ್ತ ಹಾಗೂ ನಂಬಿಕೆಗೆ ಅರ್ಹವೆಂದು ಪರಿಗಣಿಸಲಾಗುತ್ತದೆ. ಮಹಿಳೆಯರಿಗೆ ಮತ್ತೊಬ್ಬರ ಮನೆಯ ಅಡುಗೆ ಮನೆಗೂ ಹೋಗುವಷ್ಟು ಆತ್ಮೀಯತೆ, ಒಡನಾಟ, ಪರಿಚಯವಿರುತ್ತದೆ. ಹಾಗಾಗಿ ಪ್ರತಿಯೊಬ್ಬರಿಗೂ ಮೋದಿ ಸರ್ಕಾರದ ಯೋಜನೆ, ಸೌಲಭ್ಯಗಳ ಬಗ್ಗೆ ತಿಳಿಸುವ ಕೆಲಸ ಆಗಬೇಕು.