ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ
May 19 2024, 01:48 AM ISTಕನ್ನಡಪ್ರಭ ವಾರ್ತೆ ಅಥಣಿ ಅಂಜಲಿ ಅಂಬಿಗೇರ ಕೊಲೆ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಥಣಿ ತಾಲೂಕು ಕೋಳಿ, ಅಂಬಿಗ ಸಮಾಜದ ಅಧ್ಯಕ್ಷ ಎಸ್.ಕೆ.ಹೊಳೆಪ್ಪನವರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಕೃತ್ಯ ಖಂಡಿಸಿ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅಂಜಲಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಂಜಲಿ ತಂದೆ ತಾಯಿ ಇಲ್ಲದ್ದರಿಂದ ಅಜ್ಜಿಯ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಅವಳನ್ನು ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬರಬೇಕಾಗಿದೆ. ಸರ್ಕಾರ ಕುಟುಂಬಕ್ಕೆ ರಕ್ಷಣೆ ಮತ್ತು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.