ಇನ್ನೋವಾ ಕಾರಿಗೆ ಬೆಂಕಿಯಿಟ್ಟು ಯುವಕನ ಭೀಕರ ಕೊಲೆ
Mar 17 2024, 01:46 AM ISTಪ್ರೇಮ ಪ್ರಕರಣದ ಹಿನ್ನೆಲೆ ಯುವಕನನ್ನು ಸುಟ್ಟು ಕೊಲೆ ಮಾಡಿರುವ ಘಟನೆ ಶಿಕಾರಿಪುರ ತಾಲೂಕಿನ ತೊಗರ್ಸಿ ಹೊರವಲಯದ ಸ್ಮಶಾನದ ಬಳಿ ನಡೆದಿದೆ. ಶಿವಮೊಗ್ಗ ನಗರದ ಗಾಡಿಕೊಪ್ಪದ ವೀರೇಶ್ ಕೊಲೆಯಾದ ಯುವಕ. ಯುವತಿ ಅಂಕಿತ ಎಂಬವರನ್ನು ವೀರೇಶ್ ಪ್ರೀತಿಸುತ್ತಿದ್ದ. ಇಬ್ಬರು ಒಂದೇ ಜಾತಿಯವರಾಗಿದ್ದು, ಹತ್ತಿರದ ಸಂಬಂಧಿಕರು ಎನ್ನಲಾಗಿದೆ.