ಎಸ್ಡಿಎ ರುದ್ರಣ್ಣದು ಆತ್ಮಹತ್ಯೆಯಲ್ಲ, ಕೊಲೆ: ಕಚೇರಿಗೆ ಪತ್ರ?
Nov 19 2024, 12:49 AM ISTಬೆಳಗಾವಿ ತಹಸೀಲ್ದಾರ ಕಚೇರಿಯಲ್ಲಿ ಎಸ್ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕೊಲೆ ಎಂಬ ಒಕ್ಕಣೆಯುಳ್ಳ ಅನಾಮಧೇಯ ಪತ್ರ ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಪ್ರಕರಣದ ತನಿಖಾಧಿಕಾರಿ ಸೇರಿ ಹಲವರಿಗೆ ಬರೆದಿರುವ ಪತ್ರ ಎಲ್ಲೆಡೆ ಹರದಾಡಿದ್ದು, ತೀವ್ರ ಸಂಚಲನಕ್ಕೆ ಕಾರಣವಾಗಿದೆ.