ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ಗೆ ಜಾಮೀನು ನೀಡಿದ ಸಂದರ್ಭದಲ್ಲಿ ಪೂರ್ವಾನುಮತಿಯಿಲ್ಲದೆ ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬುದಾಗಿ ವಿಧಿಸಿದ್ದ ಷರತ್ತನ್ನು ಸಡಿಲಿಸಿರುವ ಹೈಕೋರ್ಟ್, ದೇಶವ್ಯಾಪಿ ಹೋಗಲು ಅನುಮತಿಸಿದೆ.
ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಪ್ರಮುಖ ಅಸ್ತ್ರವಾಗಿ ಬಳಕೆ ಮಾಡುತ್ತಿರುವ ಉಚಿತ ಕೊಡುಗೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇಂಥ ಯೋಜನೆಗಳಿಂದಾಗಿ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ.
ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಕೊಡುಗೆಗಳ ವಿರುದ್ಧ ಸ್ವತಃ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರೇ ಹೈಕೋರ್ಟ್ ಮೆಟ್ಟಿಲೇರಿರುವ ಅಚ್ಚರಿಯ ಘಟನೆ ದೆಹಲಿಯಲ್ಲಿ ನಡೆದಿದೆ.
ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಸೂಚಿಸಿರುವ ನಗರದ 5ನೇ ಎಸಿಎಂಎಂ ನ್ಯಾಯಾಲಯ, ‘ಒನ್ ಮಿನಿಟ್ ಅಪಾಲಜಿ’ ಎಂಬ ಇಂಗ್ಲಿಷ್ ಕೃತಿ ಓದುವಂತೆ ಇಬ್ಬರಿಗೂ ಸಲಹೆ ನೀಡಿದೆ.