ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಯಾಕೆ ಮಾಡಿಸುತ್ತಿಲ್ಲ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬನೇ ವ್ಯಕ್ತಿಗೆ ಪದೇ ಪದೇ ಸಾಲ ನೀಡುತ್ತಿರುವುದು ಯಾಕೆ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್ ಜಾರಿ ಮಾಡಿದೆ.
ಪತ್ನಿಯ ಕಿರಿಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕಿ ಅತುಲ್ ಸುಭಾಷ್ ಅವರ 4 ವರ್ಷದ ಪುತ್ರನ ಕಸ್ಟಡಿಯನ್ನು ಅತುಲ್ ತಾಯಿಗೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅಜ್ಜಿಯು ಮಗುವಿನ ಪಾಲಿಗೆ ಅಪರಿಚಿತರಾಗಿದ್ದಾರೆ ಎಂದು ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮದ ಕುರಿತು ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದ ಕಾಲಾವಕಾಶವನ್ನು 2025ರ ಜ.28ರವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಗುರುವಾರ ಆದೇಶಿಸಿದೆ.
ನ್ಯಾಯಾಲಯಗಳು ನ್ಯಾಯಾಂಗದ ಕಾರ್ಯ ಮಾಡುವ ಬದಲು, ಶಾಸಕಾಂಗ, ಕಾರ್ಯಾಂಗದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿವೆ. ಇದು ಸರಿಯಲ್ಲ.
ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಆರಂಭಿಸಿರುವ ಸುಪ್ರೀಂ ಕೋರ್ಟ್, ‘ಜೈ ಶ್ರೀರಾಮ್ ಎನ್ನುವುದು ಅಪರಾಧ ಹೇಗಾದೀತು?’ ಎಂದು ಪ್ರಶ್ನಿಸಿದೆ.
ಸಬ್ಸಿಡಿ ಯೋಜನೆ ದೇಶದ ಬೆಳವಣಿಗೆಗೆ ಮಾರಕವಾಗಲಿದೆ. ಜನರು ಸ್ವತಃ ದುಡಿದು ತಿನ್ನುವ ವ್ಯವಸ್ಥೆ ಜಾರಿ ಮಾಡದಿದ್ದರೆ ದೇಶ ಆರ್ಥಿಕವಾಗಿ ಸದೃಢವಾಗದು. ಸರ್ಕಾರವು ಬಡವರ ಏಳಿಗೆಗಾಗಿ ಸದುದ್ದೇಶದಿಂದ ಸಹಾಯಧನದ ಯೋಜನೆಗಳನ್ನು ಪರಿಚಯಿಸಿದೆ. ಆದರೆ ಅವುಗಳ ದುರ್ಬಳಕೆ ಪ್ರಮಾಣ ಹೆಚ್ಚಾಗಿದೆ ಎಂದ ಹೈಕೋರ್ಟ್