‘ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ನಮ್ಮನ್ನು ಒಡೆದು ಆಳಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಒಬ್ಬರಿಗೆ ನೋವಾದಾಗ ಮತ್ತೊಬ್ಬರು ಖುಷಿಪಡಬೇಡಿ. ಇಂತಹ ಮನಃಸ್ಥಿತಿಯಿಂದಲೇ ನೀವು ಹಾಳಾಗುತ್ತೀರಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ನಿಮ್ಮ (ರಾಜ್ಯ ಸರ್ಕಾರದ) ಐದು ಗ್ಯಾರಂಟಿ ಯೋಜನೆ ನೋಡಿಕೊಂಡು ಮಹಾರಾಷ್ಟ್ರದಲ್ಲಿ ಅನುಕರಣೆ ಮಾಡಲು ಹೊರಟಿದ್ದೇವೆ. ಹೀಗಿರುವಾಗ ನೀವು ಒಂದು ಗ್ಯಾರಂಟಿ ಕೈಬಿಡುತ್ತೇವೆ ಎಂದು ಹೇಳಿ ಗೊಂದಲ ಮೂಡಿಸಿದ್ದೀರಿ’ ಎಂದು ಎಐಸಿಸಿ ಅಧ್ಯಕ್ಷ ಖರ್ಗೆ ಅವರು ಡಿ.ಕೆ. ಶಿವಕುಮಾರ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿದ ಪ್ರಕರಣದಲ್ಲಿ, ತಮ್ಮ ತಂದೆಯ ಆತ್ಮಗೌರವ ಕಾಪಾಡುವಲ್ಲಿ ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ವಿಫಲರಾಗಿದ್ದಾರೆ ಎಂದು ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ವ್ಯಂಗ್ಯವಾಡಿದ್ದಾರೆ.
ಅನ್ವರ್ ಮಾಣಿಪ್ಪಾಡಿ ಅವರು, ‘ಕರ್ನಾಟಕ ವಕ್ಫ್ ಜಮೀನು ಹಗರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಕೆ.ರೆಹಮಾನ್ ಖಾನ್ ಭಾಗಿಯಾಗಿದ್ದಾರೆ’ ಎಂದು ಮಾಡಿದ ಆರೋಪ ಕೋಲಾಹಲಕ್ಕೆ ಕಾರಣವಾಗಿದೆ.
ಭೂ ವ್ಯವಹಾರಕ್ಕೆ ಸಂಬಂಧಿಸಿದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‌ನ ಸಂಪೂರ್ಣ ಉನ್ನತ ನಾಯಕತ್ವ (ಖರ್ಗೆ) ಭಾಗಿಯಾಗಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ ಹಾಗೂ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.