ಗಾಂಧೀಜಿ ಜಯಂತಿ: ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ
Aug 23 2024, 01:00 AM ISTವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.