ಮಹದಾಯಿ ವಿಚಾರವಾಗಿ ತಮ್ಮ ವಿರುದ್ಧ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಮಹದಾಯಿ ಯೋಜನೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಮಾಹಿತಿ ಇಲ್ಲ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದಾರೆ.