ಗ್ಯಾರಂಟಿ ಯೋಜನೆಗಳು ಸಂಪೂರ್ಣ ಅನುಷ್ಠಾನಗೊಂಡಿವೆ

Sep 07 2024, 01:34 AM IST
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಾಲೂಕಿನಲ್ಲಿ 54 ಸಾವಿರ ಮಂದಿ ಇದ್ದು, ಈ ಪೈಕಿ 51 ಸಾವಿರಮಂದಿಗೆ ಪ್ರತಿ ತಿಂಗಳು 2 ಸಾವಿರ ರು. ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ 5 ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಶೇ.97ರಷ್ಟು ಅನುಷ್ಠಾನಗೊಂಡಿರುವುದು ಸಂತಸದ ಸಂಗತಿಯಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ.ಶ್ರೀಧರ್‌ ಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕುರಿತು ಸಮಿತಿ ಸದಸ್ಯರು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿ ಶೇ.100ರಷ್ಟು ಗುರಿ ಸಾಧಿಸಲು ಕಾರ್ಯಕ್ರಮ ರೂಪಿಸಬೇಕೆಂದು ಅವರು ಸಲಹೆ ನೀಡಿದರು.