ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಿ ಮತಕೇಳಿ: ಸತೀಶ ಜಾರಕಿಹೊಳಿ
Mar 23 2024, 01:07 AM ISTಲೋಕಸಭೆ ಚುನಾವಣೆ ನಿಮಿತ್ತ ಗುರುವಾರ ಸಂಕೇಶ್ವರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಕೇವಲ ಪಾಕಿಸ್ತಾನ, ರಾಮ ಮಂದಿರ ಮತ್ತು ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದೆ. ಆದರೆ ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.