ಗ್ಯಾರಂಟಿ ಯೋಜನೆಗಳ ಉದ್ದೇಶ ಮಹಿಳಾ ಸ್ವಾವಲಂಬನೆ
Jul 15 2025, 01:00 AM ISTರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಸಮರ್ಪಕ ಜಾರಿಗೆ ತಂದಿದೆ. ಆ ಮೂಲಕ ರಾಜ್ಯದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ ಇಂದಿಗೆ 2 ವರ್ಷಗಳು ಪೂರ್ಣಗೊಂಡಿವೆ ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.