5 ವರ್ಷಗಳ ಕಾಲ ಗ್ಯಾರಂಟಿ ಯೋಜನೆ ರದ್ದಾಗದು: ಸಚಿವ ಮಧು
Feb 11 2024, 01:46 AM IST ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜನತೆಗೆ ನೀಡಿದ ಭರವಸೆಯಂತೆ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಯಾರಿಂದಲೂ ರದ್ದು ಮಾಡಲು ಸಾಧ್ಯವಿಲ್ಲ. ಎಸ್.ಬಂಗಾರಪ್ಪ ಅವರ ಸರ್ಕಾರ ಜಾರಿ ಮಾಡಿದ್ದ ರೈತರ ಪಂಪ್ಸೆಟ್ಗಳಿಗೆ ನೀಡಿದ ಉಚಿತ ವಿದ್ಯುತ್ ಯೋಜನೆ 3 ದಶಕ ಕಳೆದಿದ್ದರೂ ಜಾರಿಯಲ್ಲಿರುವುದೇ ಇದಕ್ಕೆ ಸಾಕ್ಷಿ. ಮಧ್ಯವರ್ತಿಗಳು ಇಲ್ಲದಂತೆ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದ್ದು, ಗ್ಯಾರಂಟಿ ಯೋಜನೆಯಡಿ ಎಲ್ಲ ಸೌಲಭ್ಯಗಳನ್ನೂ ಜಾರಿ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.