ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮನಗರ ಹಾಗೂ ಚನ್ನಪಟ್ಟಣ ಕಾರ್ಯಕರ್ತರೊಂದಿಗೆ ಶನಿವಾರ ಸಭೆ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ.
ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷಗಳು ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತೊಡಗಿಸಿಕೊಂಡಿದ್ದು, ಕಗ್ಗಂಟಾಗಿರುವ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಶನಿವಾರ ಉಭಯ ಪಕ್ಷಗಳ ಹಿರಿಯ ನಾಯಕರ ಮಹತ್ವದ ಸಭೆ ನಡೆಯಲಿದೆ.
ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಪ್ರಬಲ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಅವರನು ಮನವೊಲಿಸುವ ಪ್ರಯತ್ನವನ್ನು ಜೆಡಿಎಸ್ ನಾಯಕರು ನಡೆಸಿದರೂ ಫಲ ನೀಡಿದಂತಿಲ್ಲ.
ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮತಸಮರಕ್ಕೆ ಸಜ್ಜಾಗಿದ್ದು, ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ತನ್ಮೂಲಕ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಅಂತ ಯಾರು ಬೇಕಾದರು ಹೇಳಿಕೊಳ್ಳಬಹುದು. ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿಯೇ ಉಭಯ ಪಕ್ಷಗಳ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಚನ್ನಪಟ್ಟಣವು ತೀವ್ರ ಕುತೂಹಲ ಮೂಡಿಸಿದ್ದು, ಜೆಡಿಎಸ್ ಅಭ್ಯರ್ಥಿಯನ್ನಾಗಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೀನಮೇಷ ಎಣಿಸುತ್ತಿದ್ದಾರೆ.
ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ವಿಶೇಷವಾಗಿದೆ. ಶಿಗ್ಗಾವಿ, ಸಂಡೂರು ಒಂದಾದರೇ, ಚನ್ನಪಟ್ಟಣ ಅತ್ಯಂತ ಕುತೂಹಲ ಮೂಡಿಸಿದೆ. ಈಗಾಗಲೇ ಅಭ್ಯರ್ಥಿ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.