ರಾಜಕೀಯವೇ ಉಸಿರಾಗಿರುವ ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸ್ಟಾರ್ ವಾರ್ ಮಾತ್ರವಲ್ಲ ರಾಜಕೀಯವಾಗಿ ಬದ್ಧವೈರಿಯಾಗಿರುವ ಎರಡು ಕುಟುಂಬಗಳ ನಡುವಿನ ಕದನವಾಗಿಯೂ ಮಾರ್ಪಟ್ಟಿದೆ.
ಕಳೆದ ಎರಡು-ಮೂರು ದಿನಗಳಿಂದ ನಾಡಿನ ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಸಿ.ಪಿ.ಯೋಗೇಶ್ವರ್ ಅಂತಿಮವಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಚನ್ನಪಟ್ಟಣ ಚುನಾವಣಾ ಕಣವನ್ನು ರಂಗೇರಿಸಿದ್ದಾರೆ.
ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ಕಬ್ಬಿಣದ ಕಡಲೆಯಾಗಿದ್ದು, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಬಂಡಾಯದ ಕಾರಣ ಕೇಸರಿ ಪಕ್ಷವು ತನ್ನ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಕ್ಷೀಣಿಸಿದೆ.
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರ ಈ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಸುಗಮವಾಗಿ ಟಿಕೆಟ್ ಘೋಷಿಸಿದ ಎನ್‌ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ಚನ್ನಪಟ್ಟಣ ಕ್ಷೇತ್ರ ಕಗ್ಗಂಟಾಗಿ ಪರಿಣಮಿಸಿದೆ