ಅನಾರೋಗ್ಯ ಸಮಸ್ಯೆಗೆ ಸಕಾಲದಲ್ಲಿ ಚಿಕಿತ್ಸೆ ಅಗತ್ಯ: ರಮೇಶ್ ಬಾನೋತ್
Mar 01 2024, 02:18 AM ISTಮಹಿಳೆಯರಿಗೆ ತಾಯ್ತನದ ನಂತರ 35 ವರ್ಷ ದಾಟಿದ ಮೇಲೆ ದೇಹದಲ್ಲಾಗುವ ಬದಲಾವಣೆಯಿಂದ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಮಹಿಳೆಯಲ್ಲಿರುವ ಆರೋಗ್ಯದ ಮೇಲಿನ ತಾತ್ಸಾರ. ಒಂದು ಮನೆಯಲ್ಲಿ ಮಹಿಳೆಯೊಬ್ಬಳು ಆರೋಗ್ಯವಾಗಿದ್ದರೆ ಸಂಪೂರ್ಣ ಕುಟುಂಬವೇ ಅರೋಗ್ಯವಾಗಿರುತ್ತದೆ. ಹೀಗಾಗಿ, ಮಹಿಳೆಯರು ಎಷ್ಟೇ ಕೆಲಸದ ಒತ್ತಡಗಳಿದ್ದರೂ ಮೊದಲು ತಮ್ಮ ಆರೋಗ್ಯದ ಕಡೆ ಗಮನಕೊಡಬೇಕು