ಮಗುವಿನ ಗಂಟಲಲ್ಲಿ ಸಿಲುಕಿದ ಮೀನು!: ಸರ್ಜಿ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

Feb 07 2024, 01:47 AM IST
ಮನೆಯಲ್ಲಿ ಆಟವಾಡುವಾಗ ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ. ಹೊನ್ನಾಳಿ ತಾಲೂಕಿನ ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಮತ್ತು ರೋಜಾ ದಂಪತಿಯ 11 ತಿಂಗಳ ಮಗು ಪ್ರತೀಕ್‌ ಮನೆಯೊಳಗೆ ಆಟವಾಡುತ್ತಿತ್ತು. ಈ ವೇಳೆ ಮೀನನ್ನು ನುಂಗಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರತೆಗೆಯಲು ಪ್ರಯತ್ನ ನಡೆಸಿದ್ದಾರೆ. ಆದರೆ, ಯಶಸ್ವಿ ಆಗಿರಲಿಲ್ಲ. ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರತೆಗೆದು ಮಗುವಿನ ಜೀವ ಉಳಿಸಿದ್ದಾರೆ.

ಕೆಎಫ್‌ಡಿ ಚಿಕಿತ್ಸೆ ಪಡೆಯುತ್ತಿರುವವರ ಅಗತ್ಯವಿದ್ದರೆ ಮಣಿಪಾಲ ಆಸ್ಪತ್ರೆಗೆ ತೆರಳಿ

Feb 07 2024, 01:45 AM IST
ಸಾಗರ ಪಟ್ಟಣದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರು ಅಗತ್ಯವಿದ್ದಲ್ಲಿ ಮಣಿಪಾಲದ ಆಸ್ಪತ್ರೆಗೆ ತೆರಳಬಹುದು. ಇದಕ್ಕಾಗಿ ಅಲ್ಲಿನ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳಿಗೆ ಒತ್ತು ನೀಡಲಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸುವ ಕಾರ್ಯ ಚುರುಕುಗೊಂಡಿದೆ. ಸಾರ್ವಜನಿಕರು ಮಂಗನ ಕಾಯಿಲೆ ಬಗ್ಗೆ ಎಚ್ಚರಿಕೆ ವಹಿಸಬೇಕು. ನಿರ್ದಿಷ್ಟವಾದ ಚಿಕಿತ್ಸೆಇಲ್ಲದಿರುವುದರಿಂದ ಒಂದು ಹಂತದ ಲಸಿಕೆಗಳನ್ನು ನೀಡಲಾಗಿದೆ. ಡಿಎಂಪಿ ಎಣ್ಣೆಯನ್ನು ಗ್ರಾಮ ಪಂಚಾಯತಿ, ಆರೋಗ್ಯ ಕೇಂದ್ರಗಳಿಗೆ ಕಳುಹಿಸಲಾಗಿದೆ. ಕಾಡಿನ ಸಂಪರ್ಕದಲ್ಲಿ ಇರುವವರು ಕಟ್ಟುನಿಟ್ಟಾಗಿ ಇದನ್ನು ಬಳಸಬೇಕು ಎಂದು ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.