ಚಿತ್ರದುರ್ಗ ಲೋಕಸಭೆ ಕ್ಷೇತ್ರ ಟಿಕೆಟ್‌ಗೆ ನಾನೂ ಆಕಾಂಕ್ಷಿ

Oct 20 2023, 01:00 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಉದ್ದವಾಗುತ್ತಾ ಸಾಗಿದ್ದು, ಸಚಿವ ಆರ್.ಬಿ.ತಿಮ್ಮಪೂರ ಪುತ್ರ ವಿನಯ್ ಚಿತ್ರದುರ್ಗ ಜಿಲ್ಲೆಯ ಮಠಗಳ ಭೇಟಿ ಮಾಡಿಕೊಂಡು ಹೋದ ಬೆನ್ನಲ್ಲೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ಎಂ.ರಾಮಪ್ಪ ನಂಗೂ ಲೋಕಸಭೆಗೆ ಟಿಕೆಟ್ ಬೇಕೆಂದು ಹಕ್ಕೊತ್ತಾಯ ಮಂಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ, ಮೈಸೂರು ಜಿಲ್ಲೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ಈ ಮೊದಲು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೆ. ಕಳೆದ ಬಾರಿಯೂ ಲೋಕಸಭೆಗೆ ಟಿಕೆಟ್ ಕೇಳಿದ್ದೆ. ಈ ಬಾರಿ ಪಕ್ಷ ಅವಕಾಶ ಮಾಡಿಕೊಡುತ್ತದೆ ಎಂಬ ವಿಶ್ವಾಸವಿದೆ ಎಂದರು.