ಚುನಾವಣಾ ಅಧಿಕಾರಿಗಳು, ಸಿಬ್ಬಂದಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ: ಡೀಸಿ
Mar 02 2024, 01:46 AM ISTಎಫ್ಎಸ್, ಎಸ್ಎಸ್ ಟಿ, ವಿಎಸ್ ಟಿ, ವಿವಿಟಿ ತಂಡ ಹಾಗೂ ಪೊಲೀಸ್ ಸೆಕ್ಟರ್ ಗಳಿಗೆ ನಿಯೋಜನೆಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ತಿಳಿದುಕೊಂಡು ಪಾಲಿಸಬೇಕು. ಬರುವ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ನಿಗಧಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇರಿಸಬೇಕು.