ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜ್‌ಗೌಡ ಹೆಸರನ್ನು ಬಿಜೆಪಿ ಪಕ್ಷದ ಅಧಿಕೃತವಾಗಿ ಘೋಷಿಸಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ನಮಗೆ ಬಿಟ್ಟುಕೊಡುವಂತೆ ಬಿಜೆಪಿ ನಾಯಕರ ಮೇಲೆ ಜೆಡಿಎಸ್ ವರಿಷ್ಠರು ಒತ್ತಡ ಹಾಕುತ್ತಿದ್ದಾರೆ.
ಲೋಕಸಭೆ ಚುನಾವಣೆ ಮಾದರಿಯಲ್ಲೇ ವಿಧಾನಪರಿಷತ್ ಚುನಾವಣೆ ಎದುರಿಸಿ ಆರೂ ಕ್ಷೇತ್ರಗಳಲ್ಲೂ ಗೆಲ್ಲುವ ಗುರಿಯೊಂದಿಗೆ ಕಾಂಗ್ರೆಸ್ ಪಕ್ಷವು ಸಚಿವರು ಹಾಗೂ ಶಾಸಕರಿಗೆ ವಿವಿಧ ಕ್ಷೇತ್ರಗಳ ಉಸ್ತುವಾರಿ ವಹಿಸಿದ್ದು, ಶತಾಯ ಗತಾಯ ಕ್ಷೇತ್ರದಲ್ಲಿ ಪಕ್ಷದ ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದೆ.
ಇಲ್ಲಿವರೆಗೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಮಲೆನಾಡು ಮತ್ತು ಕರಾವಳಿಗೆ ಬಿಜೆಪಿಯಲ್ಲಿ ಪ್ರಾತಿನಿಧ್ಯ ಇರುತ್ತಿತ್ತು. ಈ ಬಾರಿ ಬಿಜೆಪಿ ಕೇವಲ ಮಲೆನಾಡು ಪ್ರದೇಶದವರಿಗೆ ಮಾತ್ರ ಟಿಕೆಟ್ ನೀಡಿದೆ. ಇದು ಬಿಜೆಪಿಯ ಕರಾವಳಿ ಟಿಕೆಟ್ ಆಕಾಂಕ್ಷಿಗಳ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ.
ಮೂರು ಬಾರಿ ಗೆದ್ದು ಬೀಗಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು ಮತ್ತೊಮ್ಮೆ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಈ ಬಾರಿ ಲೋಕಸಭೆ ಪ್ರವೇಶ ಮಾಡುವುದು ಖಚಿತ ಎನ್ನುವ ಕಾಂಗ್ರೆಸ್‌ಗೆ ಕಾರ್ಯಕರ್ತರು ಆತ್ಮವಿಶ್ವಾಸದಲ್ಲಿ ಇದ್ದಾರೆ.