ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ
Dec 03 2023, 01:00 AM ISTಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ಸಿನವರು ಪರಸ್ಪರ ಕಚ್ಚಾಟದಲ್ಲಿ ನಿರತರಾಗಿದ್ದು, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವೇನೂ ಆಪರೇಷನ್ ಕಮಲ ಮಾಡುವುದಿಲ್ಲ. ಕಾಂಗ್ರೆಸ್ಸಿನ ಸಚಿವರೇ ಸರ್ಕಾರದ ಕಾರ್ಯವೈಖರಿ, ಗುಂಪುಗಾರಿಕೆಯನ್ನು ಕಂಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾಗಲಿದ್ದಾರೆ ಎಂದರು.