ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಪಂಚ ಗ್ಯಾರಂಟಿಗಳಿಂದಾಗಿಯೂ ಮತದಾರರು ಉಪ ಚುನಾವಣೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರುಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಾಗಿ ನಿಂತು ಮತ ಚಲಾಯಿಸಿ ಗೆಲುವಿಗೆ ಕಾರಣರಾಗಿದ್ದಾರೆ.
ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದ ಗೆಲುವಿನಲ್ಲಿ ಚುನಾವಣೆಗೂ ಮುನ್ನ ಸರ್ಕಾರ ಜಾರಿಗೆ ತಂದ ‘ಲಡ್ಕಿ ಬೆಹೆನ್’ ಯೋಜನೆಯ ಪಾತ್ರ ದೊಡ್ಡದಿದೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಜನರು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಳ್ಳುನೀರು ಬಿಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ ಹೇಳಿದರು.