ಚೆಸ್ನಲ್ಲಿ ಭಾರತ ಮತ್ತೊಂದು ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಈ ಬಾರಿಯ ಫಿಡೆ ಮಹಿಳಾ ಚೆಸ್ ವಿಶ್ವಕಪ್ ಫೈನಲ್ನಲ್ಲಿ ಭಾರತದ ಇಬ್ಬರು ಆಟಗಾರ್ತಿಯರು ಸೆಣಸಾಡಲಿದ್ದಾರೆ.
ಅಂತಾರಾಷ್ಟ್ರೀಯ ಮಾಸ್ಟರ್ ದಿವ್ಯಾ ದೇಶ್ಮುಖ್ ಇಲ್ಲಿ ನಡೆಯುತ್ತಿರುವ ಫಿಡೆ ಮಹಿಳಾ ವಿಶ್ವಕಪ್ ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ. ಬುಧವಾರ ನಡೆದ ಸೆಮಿಫೈನಲ್ನ 2ನೇ ಸುತ್ತಿನಲ್ಲಿ ಮಾಜಿ ವಿಶ್ವ ಚಾಂಪಿಯನ್, ಚೀನಾದ ಝಾಂಗ್ಯೀ ಟಾನ್ ವಿರುದ್ಧ 1.5-0.5 ಅಂಕಗಳಲ್ಲಿ ಗೆಲುವು ಸಾಧಿಸಿದರು.
ಸೂಪರ್ ಯುನೈಟೆಡ್ ಚೆಸ್ ಟೂರ್ನಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್, ವಿಶ್ವದ ನಂ.1 ಆಟಗಾರ, 5 ಬಾರಿ ವಿಶ್ವ ಚಾಂಪಿಯನ್ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ರನ್ನು 6ನೇ ಸುತ್ತಿನಲ್ಲಿ ಸೋಲಿಸಿ, ಅಗ್ರಸ್ಥಾನವನ್ನು ಕಾಯ್ದುಕೊಂಡರು.
ವಿಶ್ವ ಚೆಸ್ ಚಾಂಪಿಯನ್ಶಿಪ್ ಗೆದ್ದ ಭಾರತದ ಗ್ರ್ಯಾಂಡ್ ಮಾಸ್ಟರ್. ಚೀನಾದ ಡಿಂಗ್ ಲಿರೆನ್ ವಿರುದ್ಧ 7.5-6.5 ಅಂಕಗಳಲ್ಲಿ ಗೆಲುವು. 18 ದಿನಗಳ ಹೋರಾಟದಲ್ಲಿ ಕೊನೆಗೂ 18ರ ಭಾರತೀಯನಿಗೆ ಯಶಸ್ಸು. 14ನೇ ಹಾಗೂ ಕೊನೆಯ ಸುತ್ತಿನಲ್ಲಿ ಅತಿರೋಚಕ ಗೆಲುವು. ವಿಶ್ವ ಚಾಂಪಿಯನ್ ಆದ ಅತಿ ಕಿರಿಯ ಆಟಗಾರ.