ಗ್ರಾಮದ ಜಮೀನು ರಿಯಲ್ ಎಸ್ಟೇಟ್ಗೆ
Sep 07 2024, 01:31 AM ISTಚನ್ನರಾಯಪಟ್ಟಣ ಸಮೀಪದ ಕಸಬಾ ಹೋಬಳಿ ಬಂಡಿಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ ೯೦ರಿಂದ ೯೪ರಲ್ಲಿ ಸುಮಾರು ೧೦ಕ್ಕೂ ಹೆಚ್ಚು ರೈತರು ಕಾಲದಿಂದಲೂ ಸಹ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಆದರೆ ಕೆಲ ರಿಯಲ್ ಎಸ್ಟೇಟ್ ಉದ್ಯಮಿಗಳು ಈ ಜಮೀನು ನಮಗೆ ಸೇರಿದ್ದು ಎಂದು ರೈತರನ್ನ ದಬ್ಬಾಳಿಕೆ ಮೂಲಕ ಹೊರಹಾಕಿ ಲೇಔಟ್ ಮಾಡಲು ಮುಂದಾಗಿದ್ದಾರೆ. ಬಂಡಿಹಳ್ಳಿ ಗ್ರಾಮಸ್ಥರಿಂದ ಗ್ರಾಮದ ಜಮೀನನ್ನು ಉಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.