ಅನಧಿಕೃತ ಸಾಗುವಳಿ ಜಮೀನು ಗುತ್ತಿಗೆ ಆಧಾರ: ಕೆಜಿಎಫ್ ಸ್ವಾಗತ
Aug 09 2024, 12:37 AM ISTಚಿಕ್ಕಮಗಳೂರು, ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್) ಬೆಳೆಗಾರರು ಗಡುವು ನೀಡಿರುವ ದಿನದೊಳಗೆ ಅರ್ಜಿ ಸಲ್ಲಿಸಿ ಗುತ್ತಿಗೆ ಆಧಾರದಲ್ಲಿ ಜಮೀನು ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್ಕುಮಾರ್ ಮನವಿ ಮಾಡಿದರು.