ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಜನಾಂದೋಲನದ ಮೂಲಕ ಹಸಿಹಸಿ ಸುಳ್ಳುಗಳನ್ನು ಹೇಳಿ ಜನರಲ್ಲಿ ತಪ್ಪು ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ- ಜೆಡಿಎಸ್ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಟೀಕಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಾಗಿದ ಪಾದಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಯಿತು. ಮಧ್ಯಾಹ್ನದ ವೇಳೆಗೆ ನಗರದ ಸಕ್ಕರೆ ವೃತ್ತದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಪಾದಯಾತ್ರೆಗೆ ಸೇರ್ಪಡೆಯಾದರು.
ಕರ್ನಾಟಕ ಕಾಂಗ್ರೆಸ್ ನ ಭದ್ರಕೋಟೆಯಾಗುವುದೋ ಎಂಬ ಆತಂಕದಲ್ಲಿರುವ ಬಿಜೆಪಿ-ಜೆಡಿಎಸ್ಗೆ ನಿದ್ರೆ ಮಾಡಲಾಗುತ್ತಿಲ್ಲ. ಅವರಿಗೆ ನಿದ್ರೆ ಬರುವಂತೆ ಇಂಜೆಕ್ಷನ್ ಇನ್ನೂ ಸಿಕ್ಕಿಲ್ಲ. ಸೋತ ಮೇಲೆ 5 ವರ್ಷ ಕಾಯುವ ಸಂಯಮವೂ ಇಲ್ಲ. ತಾಳ್ಮೆಯೂ ಇಲ್ಲ. ಹಾಗಾಗಿ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿದ್ದಾರೆ.