ಬಿಜೆಪಿ ಜೆಡಿಎಸ್ ರಾಜ್ಯ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿವೆ
Oct 25 2024, 12:46 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನ್ಯಾಯ, ಅಸ್ಪೃಶ್ಯತೆ, ಜಾತಿ ತಾರತಮ್ಯ, ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂದು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ ಎಂದರು.