ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ಗೆ: ಪ್ರಶಾಂತ್
Apr 06 2024, 12:45 AM ISTಚನ್ನಪಟ್ಟಣ: ಜಾತ್ಯತೀತ ಪಕ್ಷವೆಂದೇ ಹೆಸರಾಗಿದ್ದ ಜೆಡಿಎಸ್ ತನ್ನ ಸಿದ್ಧಾಂತಗಳನ್ನು ಬಿಟ್ಟು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದಲ್ಲದೇ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರ ತ್ಯಜಿಸಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಇದರಿಂದ ಬೇಸರಗೊಂಡು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾಗಿ ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಿಳಿಸಿದರು.