ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುಬಾರಕ್ ಪಠಾಣ್ ಆಯ್ಕೆ
Jul 01 2025, 01:48 AM ISTಚನ್ನರಾಯಪಟ್ಟಣ ತಾಲೂಕು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಮುಬಾರಕ್ ಪಠಾಣ್ ಆಯ್ಕೆಯಾಗಿದ್ದಾರೆ. ಶಾಸಕ ಸಿ ಎನ್ ಬಾಲಕೃಷ್ಣ ಮಾತನಾಡಿ, ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನು ಈ ದಿನ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾದ ಮುಬಾರಕ್ ಅವರು ಮುಸ್ಲಿಂ ಸಮಾಜದ ಹಿರಿಯ ಮತ್ತು ಕಿರಿಯ ಮುಖಂಡರ ಸಲಹೆ, ಸಹಕಾರ ಪಡೆದು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲಿ ಎಂದು ಸಲಹೆ ನೀಡಿದರು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮೆಲ್ಲರ ಸಂಪೂರ್ಣ ಸಹಕಾರ ಇರಲಿ ಎಂದರು.