ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

Mar 07 2025, 12:46 AM IST
ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಜಮೆ ಮಾಡಬೇಕು ಮತ್ತು ಉಳಿದ ಗ್ಯಾರಂಟಿಗಳನ್ನು ಸಮರ್ಪಕವಾಗಿ ನೀಡುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿದೆ. ಅಂತೆಯೇ ಪಂಚ ಗ್ಯಾರಂಟಿಗಳಲ್ಲಿ ಯಾವುದೇ ಲೋಪ ಆಗದಂತೆ ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡುವುದಾಗಿ ಬಣ್ಣದ ಮಾತುಗಳನ್ನೂ ಆಡಿತ್ತು. ಆದರೆ ಆರಂಭದಿಂದಲೂ ಪ್ರತಿ ತಿಂಗಳು ಅರ್ಹ ಫಲಾನುಭವಿಗಳ ಖಾತೆಗೆ ಹಣ ಹಾಕದೇ ಇರುವುದನ್ನು ಖಂಡಿಸುತ್ತೇವೆ ಎಂದರು.