ರಾಜ್ಯದಲ್ಲಿ ಸುಮಾರು ಐದಾರು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ನೇರಾ-ನೇರ ಸ್ಪರ್ಧೆ ಇತ್ತು. ಆದರೆ ಈಗ ಜೆಡಿಎಸ್ ಪಕ್ಷ ಎಲ್ಲಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ವಿಶ್ವಾಸದಿಂದ ನುಡಿದರು.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಚನೆಯಾದ ಬಳಿಕ ಎರಡನೇ ಬಾರಿಗೆ ಮುಖಭಂಗ ಉಂಟಾಗಿದೆ. ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್ ಅವರಿಗೆ ಸೋಲು ಉಂಟಾಗಿತ್ತು.