ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
Jun 21 2024, 01:01 AM ISTರಾಜ್ಯದ ಜನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಜನರ ಭಾವನೆಯನ್ನು ಅಗೌರವದಿಂದ ನೋಡುತ್ತಿದೆ. ಒಂದೆಡೆ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದರೆ, ಇನ್ನೊಂದಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭ್ರಷ್ಟಾಚಾರ ರಾಜ್ಯದಲ್ಲಿ ಮಿತಿ ಮೀರಿದೆ.