ಮೋದಿ ಪ್ರಮಾಣವಚನ: ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಂಭ್ರಮ
Jun 10 2024, 12:30 AM IST ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಸದಸ್ಯ ಆರ್.ಕೆ.ಸಿದ್ರಾಮಣ್ಣ, ಮುಖಂಡರಾದ ಗಿರೀಶ್ ಪಟೇಲ್ ಸೇರಿ ಹಲವು ಮುಖಂಡರು ಪಕ್ಷದ ಕಚೇರಿಗೆ ಆಗಮಿಸಿ ಮೋದಿ ಪ್ರಮಾಣ ವಚನ ನೇರಪ್ರಸಾರ ವೀಕ್ಷಿಸಿದರು.