ಮಂಡ್ಯ ಲೋಕಸಭಾ ಕ್ಷೇತ್ರದಿಂದ ನೀವೇ ಅಭ್ಯರ್ಥಿಯಾಗಬೇಕು ಎಂದು ಒತ್ತಾಯಿಸಿ ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಗಳೂರು ಜೆ.ಪಿ.ನಗರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ನವರೇ ಸೋಲಿಸಿದರು. ಆದರೆ, ನಾವು ಕಾಂಗ್ರೆಸ್ನವರಂತೆ ಮೈತ್ರಿ ಅಭ್ಯರ್ಥಿಗೆ ಮೋಸ ಮಾಡಲ್ಲ.