ಬಿಜೆಪಿ - ಜೆಡಿಎಸ್ ಮೈತ್ರಿ ತಾಪಂ,ಗ್ರಾಪಂನಲ್ಲೂ ಆಗುತ್ತೆ
Oct 13 2023, 12:15 AM ISTರಾಜ್ಯಕ್ಕೆ ಹತ್ತು ಹಲವು ನಾಯಕರನ್ನು ನೀಡಿರುವ ಜೆಡಿಎಸ್ ಎಲ್ಲ ಭಾಗದಲ್ಲಿಯೂ ಬಲಿಷ್ಠವಾಗಿದೆ. ಹಾಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಹಾಗೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷದ ಕಾರ್ಯಕರ್ತರು ಪಣತೊಡಬೇಕು ಎಂದು ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಕರೆ ನೀಡಿದರು.ಈ ಮೈತ್ರಿ ಬರೀ ಲೋಕಸಭೆ ಚುನಾವಣೆಗಷ್ಟೇ ಸೀಮಿತವಲ್ಲ ತಾಪಂ ಹಾಗೂ ಗ್ರಾಪಂ ಮಟ್ಟದವರೆಗೂ ಮುಂದುವರಿಯಲಿದೆ ಎಂದು ಇದೇ ವೇಳೆ ಹೇಳಿದರು.