ಜಮೀರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
Nov 14 2024, 12:56 AM ISTಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ ಪದಬಳಕೆ ಮಾಡಿ, ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಲ್ಲದೇ, ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜಮೀರ್ ಜನರನ್ನು ಪ್ರಜೋದಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಪಟ್ಟಣದಲ್ಲಿ ಬುಧವಾರ ಯುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.