ಅಧಿಕಾರ ಎಲ್ಲಿ ಸಿಗುತ್ತದೆಯೋ ಯೋಗೇಶ್ವರ್ ಅಲ್ಲಿಗೆ ಜಂಪ್ ಆಗುತ್ತಾರೆ. ಯಾವಾಗ ತರಾತುರಿಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಆಗಲೇ ಅವರು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿತ್ತು ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಜೆಡಿಎಸ್ ನಾಯಕರು ತಮ್ಮ ಪಕ್ಷದಿಂದ ಕಣಕ್ಕಿಳಿಸಬೇಕಾದ ಅಭ್ಯರ್ಥಿಗಾಗಿ ಕೊನೆಯ ಕ್ಷಣದ ಕಸರತ್ತು ನಡೆಸಿದ್ದು, ಗುರುವಾರ ಅಂತಿಮಗೊಳ್ಳುವ ಸಾಧ್ಯತೆಯಿದೆ.
ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಸುಗಮವಾಗಿ ಟಿಕೆಟ್ ಘೋಷಿಸಿದ ಎನ್‌ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ಚನ್ನಪಟ್ಟಣ ಕ್ಷೇತ್ರ ಕಗ್ಗಂಟಾಗಿ ಪರಿಣಮಿಸಿದೆ
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.