ದೇಶದ ಅತಿದೊಡ್ಡ ಸಂಸ್ಥೆ ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಅವರು ಬೆಂಗಳೂರಿಗಿದ್ದ ಸಿಲಿಕಾನ್ ಸಿಟಿಯ ಹೆಸರನ್ನು ಗಟ್ಟಿಗೊಳಿಸಲು ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಿದ್ದಾರೆ.
ಟಾಟಾ ಗ್ರೂಪ್ ಕಂಪನಿಗಳ ಷೇರುಗಳು ಗುರುವಾರ ಏರಿಕೆ ಕಂಡಿವೆ. ಇದರಲ್ಲಿ ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್ ಸಾಧಕ ಕಂಪನಿಗಳಾಗಿ ಹೊರಹೊಮ್ಮಿವೆ ಹಾಗೂ ಶೇ.10ರಷ್ಟು ಏರಿಕೆಯಾಗಿದೆ.
ಬುಧವಾರ ನಿಧನರಾದ ಟಾಟಾ ಸಮೂಹ ಸಾಮ್ರಾಜ್ಯದ ವಿಶ್ರಾಂತ ಮುಖ್ಯಸ್ಥ ಹಾಗೂ ಶ್ರೇಷ್ಠ ಸಮಾಜಸೇವಕ ರತನ್ ಟಾಟಾ ಅವರ ಅಂತ್ಯಕ್ರಿಯೆ ಸಹಸ್ರಾರು ಶೋಕತಪ್ತ ಗಣ್ಯರು ಹಾಗೂ ಅಭಿಮಾನಿಗಳ ನಡುವೆ ಮುಂಬೈನ ವರ್ಲಿಯಲ್ಲಿರುವ ಪಾರ್ಸಿ ಚಿತಾಗಾರದಲ್ಲಿ ನೆರವೇರಿತು
ರತನ್ ಟಾಟಾ ತಮ್ಮ ಕನಸಿನ ಟಾಟಾ ನ್ಯಾನೋ ಕಾರು ಘಟಕವನ್ನು ಆರಂಭಿಸಲು ಮೊದಲಿಗೆ ಪಶ್ಚಿಮ ಬಂಗಾಳದ ಸಿಂಗೂರು ಗ್ರಾಮ ಆಯ್ಕೆ ಮಾಡಿಕೊಂಡಿದ್ದರು. ಇದಕ್ಕೆ ಅಂದಿನ ಸಿಪಿಎಂ ಸರ್ಕಾರ ಭೂಮಿ ನೀಡಿತ್ತು. ಅದರಂತೆ ಘಟಕ ನಿರ್ಮಾಣದ ಕಾಮಗಾರಿಯೂ ಆರಂಭವಾಗಿತ್ತು.
ದೇಶದ ಮನೆಮನೆಗಳಲ್ಲೂ ನಿತ್ಯವೂ ಟಾಟಾ ಸಮೂಹದ ಉತ್ಪನ್ನಗಳ ಬಳಕೆ ಮಾಡಲಾಗುತ್ತದೆ. ಗುಣಮಟ್ಟ, ವಿಶ್ವಾಸಾರ್ಹತೆ ಉಳಿಸಿಕೊಂಡ 156 ವರ್ಷ ಇತಿಹಾಸ ಕಂಪನಿ ಹೊಂದಿದೆ.
ರತನ್ ಟಾಟಾ ಅವರು ಟಾಟಾ ಸಮೂಹದ ಸಂಸ್ಥಾಪಕ ಜೆಮ್ಶೆಡ್ಜೀ ಟಾಟಾ ಅವರ ಮರಿ ಮೊಮ್ಮಗ. 1937ರಲ್ಲಿ ಮುಂಬೈನಲ್ಲಿ ಅವರು ಜನಿಸಿದರು.
ದಿವಂಗತ ರತನ್ಜಿ ಟಾಟಾ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಘೋಷಿಸಿದ್ದಾರೆ. ಆದರೆ ಅಂತಿಮ ಸಂಸ್ಕಾರದ ದಿನಾಂಕದ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.
ಭಾರತದ ಅತಿದೊಡ್ಡ ಸಮೂಹ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಮೂಹದ ಮುಖ್ಯಸ್ಥರಾಗಿದ್ದ ಹಾಗೂ ದೇಶ-ವಿದೇಶಗಳಲ್ಲಿ ಮನೆಮಾತಾಗಿದ್ದ ರತನ್ ಟಾಟಾ (86) ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ.