ಕಾರ್ಯಕರ್ತರ ಆಯ್ಕೆ ಅಭ್ಯರ್ಥಿಗೆ ಟಿಕೆಟ್ ಕೊಡಬೇಕಿತ್ತು: ಶಾಸಕ ಗೋಪಾಲಕೃಷ್ಣ ಬೇಳೂರು
Jun 11 2024, 01:30 AM ISTಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರಬಹುದು. ಆದರೆ ಮುಂದಿನ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರ ಗೆಲ್ಲಿಸಿಕೊಂಡು ಬರುವ ಶಕ್ತಿ ಬೇಳೂರಿಗೆ ಇದೆ. ಅದನ್ನು ತಡೆಯುವ ತಾಕತ್ತು ಯಾರಿಗಾದರೂ ಇದ್ದರೆ ತಡೆಯಲಿ ಎಂದು ಸವಾಲು ಹಾಕಿದ ಬೇಳೂರು, ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಾಲಪ್ಪ ಹೇಳುತ್ತಿದ್ದಾರೆ. ಕೆಲವು ವೈಯಕ್ತಿಕ ವಿಷಯಗಳ ಗಲಾಟೆ ಹೊರತುಪಡಿಸಿ ಎಲ್ಲ ಸಂದರ್ಭದಲ್ಲೂ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.