ವಿಧಾನ ಪರಿಷತ್ ಚುನಾವಣೆ: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒತ್ತಾಯ
May 31 2024, 02:15 AM ISTಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಕೊಡಗಿನಲ್ಲಿ ಬಿಜೆಪಿಯ ಭದ್ರಕೋಟೆ ಬೇಧಿಸುವಲ್ಲಿ ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ಗೆಲವಿನಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿದ್ದವು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಅಲ್ಪಸಂಖ್ಯಾತರ ಮತಗಳಿದ್ದು, ಇದರಲ್ಲಿ ಶೇ.99 ರಷ್ಟು ಮತಗಳು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊರಕಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.