ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ. ಇದು ನಿಜವೇ ಆಗಿದ್ದರೆ ಒಳ್ಳೆಯ ಹೆಜ್ಜೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಬಹುಶಃ ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಕಟುವಾಗಿ ಟೀಕಿಸಿದ್ದಾರೆ.
ಭಾರತದ ಆರ್ಥಿಕತೆ ನಿರ್ಜೀವವಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ, ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ಬಹಿರಂಗಪಡಿಸಿದೆ.
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಾಕಾರಗೊಳ್ಳುವ ಲಕ್ಷಣ ಕ್ಷೀಣ ಆಗುತ್ತಿದ್ದಂತೆಯೇ ‘ಆಗಸ್ಟ್ 1ರಿಂದ ಭಾರತ ಶೇ. 25ರಷ್ಟು ಸುಂಕ ಪಾವತಿಸಬೇಕಾಗುತ್ತದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಆರಂಭವಾದ ಆಪರೇಷನ್ ಸಿಂದೂರ ಕಾರ್ಯಾಚರಣೆ ಕುರಿತ ಚರ್ಚೆಯಲ್ಲಿ ಕಾಂಗ್ರೆಸ್ ಸಂಸದ ಗೌರವ್ ಗಗೋಯ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು
‘ಅಮೆರಿಕ ಮೊದಲು’ ನೀತಿಯ ಬೆಂಬಲಿಗರಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತೀಯರು ಸೇರಿದಂತೆ ವಿದೇಶಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಬದಲು ಆ ಅವಕಾಶವನ್ನು ಅಮೆರಿಕನ್ನರಿಗೆ ನೀಡುವಂತೆ ದೈತ್ಯ ಟೆಕ್ ಕಂಪನಿಗಳಾದ ಗೂಗಲ್, ಮೈಕ್ರೊಸಾಫ್ಟ್‌ಗೆ ಆದೇಶಿಸಿದ್ದಾರೆ.