ಭಾರತದ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಅಮೆರಿಕ ಇರಿಸಿದ್ದ ನಿಧಿಯನ್ನು ಆ ದೇಶದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಎಲಾನ್ ಮಸ್ಕ್ ಅಧ್ಯಕ್ಷತೆಯ ‘ಅಮೆರಿಕ ಕ್ಷಮತಾ ಇಲಾಖೆ (ಡಾಜ್) ರದ್ದು ಮಾಡಿದೆ.
: ಅಧಿಕಾರ ವಹಿಸಿಕೊಂಡ ಬಳಿಕ ಒಂದರ ಮೇಲೊಂದರಂತೆ ತೆರಿಗೆ ಹೇರುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಗ ಉಕ್ಕು ಮತ್ತು ಅಲ್ಯುಮಿನಿಯಂ ಆಮದಿನ ಮೇಲೆ ಶೇ.25ರಷ್ಟು ತೆರಿಗೆ ಹೇರುವುದಾಗಿ ಘೋಷಿಸಿದ್ದಾರೆ.
ವಿದೇಶಗಳಿಗೆ ನೀಡುತ್ತಿದ್ದ ದೇಣಿಗೆ ಸ್ಥಗಿತಗೊಳಿಸಿದ ಬೆನ್ನಲ್ಲೇ ಇದೀಗ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ (ಯುಎನ್‌ಎಚ್‌ಆರ್‌ಸಿ)ಯಿಂದ ಹೊರಬರುವ ಕಾರ್ಯಾದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಸಹಿಹಾಕಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಫಿಕ್ಸ್ ಮಾಡಲೆಂದೇ ವಿದೇಶಾಂಗ ಸಚಿವ ಜೈಶಂಕರ್ ಕಳೆದ ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ತೆರಳಿದ್ದರು ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.